ಖಾಸಗಿ ಆಸ್ಪತ್ರೆಗಳ ವೈದ್ಯರಿಂದ ಬೆಳಗಾವಿ ಚಲೋ

0
1012

ಬೆಂಗಳೂರು: ವೈದ್ಯರಿಂದ ಕೆಪಿಎಂಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯದ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಂಡಿದೆ.

ಬೆಳಗಾವಿ ಚಲೋ ಎಂಬ ಘೋಷಣೆಯಡಿಯಲ್ಲಿ ನೂರಾರು ವೈದ್ಯರು ಬೆಳಗಾವಿಗೆ ಆಗಮಿಸಿದ್ದು, ತಾರಿಹಾಳದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಗೊಂದಲ ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರ ಹೂಡಿರುದರಿಂದ ಧಾರವಾಡದ ಎಲ್ಲಾ ನರ್ಸಿಂಗ್ ಹೋಮ್, ಕ್ಲಿನಿಕ್‌ಗಳಲ್ಲಿ ಹೊರ ರೋಗಿಗಳ ವಿಭಾಗ ಸಂಪೂರ್ಣ ಸ್ಥಗಿತಗೊಂಡಿದೆ. ವೈದ್ಯರು ಮುಷ್ಕರ ನಡೆಸಲು ಬೆಳಗಾವಿ ಚಲೋ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದ್ದು. ಇದರಿಂದಾಗಿ ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬಂದಿರುವ ಜನರು ವಾಪಸ್ ಮರಳುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಬಂದ್ ಆಗಿರುವುದರಿಂದ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.