ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿದ್ದರಾಮಯ್ಯ

0
253

ನವದೆಹಲಿ: ಕಾವೇರಿ ನೀರು ಬಿಡುವಂತೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ನಮಗೇ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡುವುದು ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಂದಿನ ತಿಂಗಳು ಕಾವೇರಿ ತೀಪು೯ ಬರಲಿದ್ದು, ನಮ್ಮ ಪರವಾಗುವ ನಿರೀಕ್ಷೆಯಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರ ಸವ೯ಪಕ್ಷ ಸಭೆ ಕರೆದು, ಪ್ರತಿಪಕ್ಷಗಳ ಜೊತೆ ಚಚಿ೯ಸಿ ತೀಮಾ೯ನ ತೆಗೆದುಕೊಳ್ಳಾಗುವುದು. ಪ್ರಧಾನಿ ಮೋದಿ ಮಧ್ಯ ಪ್ರವೇಶದಿಂದ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ. ಈ ವಿಚಾರವನ್ನು ರಾಜ್ಯ ಬಿಜೆಪಿ ನಾಯಕರು ಪ್ರಧಾನಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.