ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜಿಗೆ ಉತ್ತಮ ಫಲಿತಾಂಶ

0
1199

ಬಂಟ್ವಾಳ,ಎ15: ದ್ವಿತೀಯ ಪಿಯುಸಿ 2018-19ರ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ಗಳಿಸಿದೆ. ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ.95 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 11 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, 43 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾವಿಭಾಗದಲ್ಲಿ ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, 21 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಫಾಮಿಝಾ – 561, ಕೌಸಿರಾ -555, ಅಸೀಬಾ ಬಾನು- 538, ಸುಹೈರಾ ಬಾನು- 538, ಇನ್ಝಾ ಫರ್ಹತ್- 536, ಫಾತಿಮ ಅಶಿಕಾ- 532, ನಾಫಿಯಾ- 529, ಸಾಹಿನಾ‌.ಬಿ- 525, ಶಹನಾಝ್.ವಿ- 525, ಅನೀಶಾ- 518, ಆಯಿಶತ್ ಕಶ್ಮುನಾ- 511 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, ಕಲಾ ವಿಭಾಗದಲ್ಲಿ ಫಾತೀಮಾ ಅಫೀಝಾ- 519, ಆಯಿಶತುಲ್ ಅಶಿಫಾ-510 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಮತ್ತು ಉಪನ್ಯಾಸಕಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.