ಬಿಜೆಪಿಯ ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ: ಬಿಜೆಪಿಯಲ್ಲಿ ಇದೇ ಮೊದಲು

0
276

ಹೊಸದಿಲ್ಲಿ, ಜೂ.18: ಬಿಜೆಪಿ ಕಾರ್ಯಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಅಮಿತ್ ಶಾರೇ ಮುಂದುವರಿಯಲಿದ್ದಾರೆ. ಅಧ್ಯಕ್ಷ ಸ್ಥಾನದ ಅವಧಿ ಮುಗಿದಿದ್ದು ಗೃಹ ಸಚಿವರಾಗಿ ಅಮಿತ್ ಶಾ ಪ್ರಮಾಣವಚನ ಸ್ವೀಕರಿಸಿದ್ದರೂ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿ ನಡೆದಿದೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಸಮೀಪಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಕೂಡ ಭಾವಹಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷರಾಗಿ ಅಮಿತ್ ಶಾರನ್ನು ಉಳಿಸಿಕೊಳ್ಳಲು ತೀರ್ಮಾನಿಸಲಾಯಿತು. ಆರೆಸ್ಸೆಸ್ ಮತ್ತು ಮೋದಿಗೆ ಅಮಿತ್‍ ಶಾ ಸಮಾನ ನೆಚ್ಚಿನ ನಾಯಕರಾಗಿದ್ದಾರೆ. ಹಿಮಾಚಲ ಪ್ರದೇಶದ ಜೆಪಿ ನಡ್ಡಾ ಬ್ರಾಹ್ಮಣ ಜಾತಿಗೆ ಸೇರಿದವರಾಗಿದ್ದಾರೆ. ಬಿಜೆಪಿಯ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯ ಬಳಿಕ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಅಮಿತ್ ಶಾರನ್ನು ಪಾರ್ಟಿ ಮತ್ತು ಸರಕಾರದಲ್ಲಿ ಪ್ರಮುಖ ಸ್ಥಾನದಲ್ಲಿ ಉಳಿಸಿಕೊಳ್ಳುವ ತೀರ್ಮಾನವನ್ನು ಪ್ರಕಟಿಸಿದ್ದಾರೆ.