ದಿಲ್ಲಿಯ ಹೋರಾಟ ಭೂಮಿಯಲ್ಲಿ ಮತ್ತೋರ್ವ ರೈತನ ಸಾವು

0
294

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ಕೇಂದ್ರ ಸರಕಾರದ ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ದಿಲ್ಲಿಯ ಗಡಿಯಲ್ಲಿ ಇನ್ನೊಬ್ಬ ರೈತ ಮೃತಪಟ್ಟಿದ್ದಾರೆ. ಟಿಕ್ರಿ ಗಡಿಯಲ್ಲಿ ಪಂಜಾಬ್ ಮಾನ್ಸ ಎಂಬಲ್ಲಿ 48 ವರ್ಷದ ಹರ್‍ವಿಂದರ್ ಸಿಂಗ್ ಮೃತಪಟ್ಟಿದ್ದಾರೆ.

ಹೃದಯಾಘಾತದಿಂದ ಅವರ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ರೈತ ಹೋರಾಟ ಎರಡು ತಿಂಗಳಿನಿಂದ ನಡೆಯುತ್ತಿದ್ದು, ಇದರಲ್ಲಿ ನೂರಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಕಠಿಣ ಚಳಿಯಿಂದಾಗಿ ಆರೋಗ್ಯ ಸಮಸ್ಯೆಗಳು ರೈತರ ಸಾವಿಗೆ ಕಾರಣವೆಂದು ಹೇಳಲಾಗಿದೆ. ಮಾತ್ರವಲ್ಲ ಹಲವು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.