ಪಶ್ಚಿಮ ಬಂಗಾಳ: ಬಿಜೆಪಿ ಸೇರಿದ ಭಾರತದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ

0
129

ಸನ್ಮಾರ್ಗ ವಾರ್ತೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯ ಕಾವು ಜೋರಾಗಿದೆ. ಮಮತಾ ಬ್ಯಾನರ್ಜಿಯನ್ನು ಹೇಗಾದರೂ ಮಾಡಿ ಸೋಲಿಸಲು ಬಿಜೆಪಿ ತಂತ್ರ ಹೆಣೆಯುತ್ತಿದೆ. ಈ ಮಧ್ಯೆ ಭಾರತದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಅವರು ಕೋಲ್ಕತ್ತಾದ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಅವರ ಸಮ್ಮುಖದಲ್ಲಿ ದಿಂಡಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.

ಭಾರತೀಯ ಬೌಲರ್ ಅಶೋಕ್ ದಿಂಡಾ ಅವರು ಆಟದ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದರು. 13 ಏಕದಿನ ಮತ್ತು ಒಂಬತ್ತು ಟಿ 20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಕ್ರಮವಾಗಿ 12 ಮತ್ತು 17 ವಿಕೆಟ್‌ಗಳನ್ನು ಪಡೆದಿದ್ದರು.

ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ದಿಂಡಾ ಅವರ ಸೇರ್ಪಡೆಯೂ ಎಷ್ಟು ಲಾಭ ತರುತ್ತದೆಯೋ ಕಾಡು ನೋಡಬೇಕಿದೆ. ಪ್ರಸ್ತುತ ಸರಕಾರದ ಅಧಿಕಾರಾವಧಿ ಮೇ 30 ಕ್ಕೆ ಮುಗಿಯುತ್ತಿದ್ದಂತೆ 294 ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ವಿಧಾನಸಭೆಯ ಚುನಾವಣೆ ಈ ವರ್ಷ ನಡೆಯಲಿದೆ.