ಕರಾವಳಿಯಾದ್ಯಂತ ಬಕ್ರೀದ್ ಸಂಭ್ರಮ: ಸುರಕ್ಷಿತ ಅಂತರ ಪಾಲನೆಯೊಂದಿಗೆ ನಮಾಝ್

0
722

ಸನ್ಮಾರ್ಗ ವಾರ್ತೆ

ಮಂಗಳೂರು,ಜು.31:ನೆರೆಯ ಕೇರಳ ರಾಜ್ಯ ಸೇರಿದಂತೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ದ.ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಸರಳ ಬಕ್ರೀದ್ ಸಂಭ್ರಮಾಚರಣೆಯು ಕಂಡು ಬಂತು. ಕರ್ನಾಟಕದ ವಿವಿಧ ಜಿಲಗಲೆಗಳಲ್ಲಿ ನಾಳೆ ಬಕ್ರೀದ್ ಆಚರಣೆ ನಡೆಯಲಿ.

ಕರಾವಳಿಯಾದ್ಯಂತ ಕೋವಿಡ್-19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಸುರಕ್ಷಿತ ಅಂತರ ಕಾಪಾಡುವುದರೊಂದಿಗೆ ಮಾಸ್ಕ್  ಧರಿಸುವ ಹಾಗೂ ತಮ್ಮ ತಮ್ಮ ನಮಾಝ್‌ನ ಚಾಪೆಗಳನ್ನು ಮನೆಯಿಂದಲೇ ತರುವ ಮೂಲಕ ಮಸೀದಿಗಳಲ್ಲಿ ಸಾಮೂಹಿಕವಾಗಿ ಈದ್ ನಮಾಝ್ ನಿರ್ವಹಿಸುವುದು ಕಂಡು ಬಂತು.

ಪ್ರವಾದಿ ಇಬ್ರಾಹೀಂ (ಅ) ಮತ್ತು ಅವರ ಪುತ್ರ ಇಸ್ಮಾಯಿಲ್(ಅ)ರವರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲಾಗುವ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ.

ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್‌ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣದಿಂದಾಗಿ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಇದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯದಿರುವುದು ಇದೇ ಮೊದಲ ಬಾರಿಯಾಗಿದೆ. ಬಹುತೇಕ ಜನರು ತಮ್ಮ ವ್ಯಾಪ್ತಿಯ ಜಮಾಅತ್ ಮಸೀದಿಗಳಲ್ಲಿ ಈದ್ ನಮಾಝ್ ನಿರ್ವಹಿಸುವುದರು. ಇನ್ನು ಕೆಲವು ಕಡೆಗಳಲ್ಲಿ ತಲಾ 50 ಮಂದಿಯಂತೆ ಹಂತ ಹಂತವಾಗಿ ನಮಾಝ್  ನಿರ್ವಹಿಸುವುದು ಕಂಡು ಬಂತು.

60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 10 ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಮಸೀದಿಗೆ ಪ್ರವೇಶಿಸಲು ಅವಕಾಶ ಇರಲಿಲ್ಲ.
ಪ್ರತಿಯೊಬ್ಬರೂ ಮಾಸ್ಕ್ ಧರಿಸಿದ್ದರು. ಕೆಲವು ಮಸೀದಿಗಳಲ್ಲಿ ಪ್ರವೇಶಿಸುವ ಮುನ್ನ ದೇಹದ ತಾಪಮಾನವನ್ನು ತಪಾಸಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿತ್ತಲ್ಲದೇ, ಕೈ ತೊಳೆಯಲು ಸೋಪ್ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು. ಮಾಸ್ಕ್ ಧರಿಸದೇ ಮಸೀದಿಗಳಿಗೆ ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿತ್ತು.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.