ಮುಖ್ಯಮಂತ್ರಿಯಾಗಿರುವ ಇವರು ಕಾಂಗ್ರೆಸ್ ನ ಮುಂದಿನ ರಾಷ್ಟ್ರೀಯ ಅಧ್ಯಕ್ಷರಾಗುವ ಸಾಧ್ಯತೆ: ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆ

0
535

ಹೊಸದಿಲ್ಲಿ, ಜೂ. 24: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೊಸ ಅಧ್ಯಕ್ಷರ ಹುಡುಕಾಟ ಆರಂಭವಾಗಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಪಾರ್ಟಿಯ ಕಾರ್ಯಕಾರಿ ಸಮಿತಿಯಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಅಶೋಕ್ ಗೆಹ್ಲೋಟ್‍ರಲ್ಲಿ ಅಭಿಪ್ರಾಯವನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ನಡುವೆ ಚರ್ಚೆ ಆಗಿದೆ. ಮುಂದಿನ ಅಧ್ಯಕ್ಷರಾಗಿ ಗೆಹ್ಲೋಟ್ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೆ ಮುಖ್ಯ ಮಂತ್ರಿ ಸ್ಥಾನ ಬಿಟ್ಟುಕೊಡಲು ಸದ್ಯ ಗೆಹ್ಲೋಟ್ ಇಚ್ಛಿಸಿಲ್ಲ.

ಅಖಿಲೇಶ್ ಯಾದವ್ , ನವೀನ್ ಪಟ್ನಾಯಕ್, ಜಯಲಲಿತಾ ಮತ್ತು ಮಮತಾ ಬ್ಯಾನರ್ಜಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಆದ್ದರಿಂದ ಬಹುತೇಕ ಗೆಹ್ಲೋಟ್ ಕಾಂಗ್ರೆಸ್‍ನ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆಗೆ ಹೆಚ್ಚು ಬಲ ಬಂದಿದೆ.