ವಿಕಲಚೇತನರ ರಿಯಾಯಿತಿ ಬಸ್‍ಪಾಸ್ ಸೌಲಭ್ಯ: ಆನ್‍ಲೈನ್‍ ಅರ್ಜಿ ಆಹ್ವಾನ

0
95

ಸನ್ಮಾರ್ಗ ವಾರ್ತೆ

ಮಂಗಳೂರು: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹೊಸ‌/ನವೀಕರಣದ ರಿಯಾಯತಿ ಬಸ್‍ಪಾಸ್‍ಗಾಗಿ ಆನ್‍ಲೈನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 15 ರಿಂದ ವಿಕಲಚೇತನರ ಪಾಸುಗಳ ವಿತರಣೆ/ನವೀಕರಣವನ್ನು ಪ್ರಾರಂಭಿಸಲಾಗಿದ್ದು, ಫಲಾನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ https://serviceonline.gov.in ಮುಖಾಂತರವೇ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ವಿಕಲಚೇತನರ ರಿಯಾಯಿತಿ ಬಸ್‌ಪಾಸ್ ನವೀಕರಿಸಿಕೊಳ್ಳುವವರು ಕ.ರಾ.ರ.ಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್‌ಗಳಲ್ಲಿ ಹಾಗೂ ಹೊಸದಾಗಿ ಪಾಸ್ ಪಡೆಯುವವರು ವಿಭಾಗೀಯ ಕಛೇರಿಯಲ್ಲಿ ಹಣ ಪಾವತಿಸಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2458173 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.