ರೈತರ ಟ್ರ್ಯಾಕ್ಟರ್ ರ‌್ಯಾಲಿಗೆ FITU ಸಂಪೂರ್ಣ ಬೆಂಬಲ

0
321

ಸನ್ಮಾರ್ಗ ವಾರ್ತೆ

ಬೆಂಗಳೂರು: ರೈತ ವಿರೋಧಿ ಕಾಯ್ದೆಯ ವಿರುದ್ಧ ಗಣರಾಜ್ಯೋತ್ಸವ ದಿನದಂದು ನಡೆಯಲಿರುವ ರೈತರ ಟ್ರ್ಯಾಕ್ಟರ್‌ ಗ್ಯಾಲಿಯಲ್ಲಿ ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಭಾಗವಹಿಸಲಿದೆ. ಮತ್ತು ದೇಶಾದ್ಯಂತ ಇದನ್ನು ಬೆಂಬಲಿಸಲಿದೆ.

ರವಿವಾರ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಎಫ್ ಐಟಿಯು ರಾಷ್ಟ್ರೀಯ ಅಧ್ಯಕ್ಷ ಸುಬ್ರಹ್ಮಣಿ ಆರುಮುಗಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸರಕಾರ ಬಂಡವಾಳಶಾಹಿಗಳ ಹಿತಕ್ಕಾಗಿ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ಬಲವಾಗಿ ಖಂಡಿಸಲಾಯಿತು. ಅದೇ ರೀತಿ ಅಸಂವಿಧಾನಿಕವಾದ ಕಾರ್ಮಿಕ ಕಾಯಿದೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.

ಅದೇ ರೀತಿ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಸಿಗುವಂತಹ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.

ಪ್ರಧಾನ ಮಂತ್ರಿಯವರ ಆತ್ಮ ನಿರ್ಭರತೆ ಯೋಜನೆ ಸಂಪೂರ್ಣ ಬೋಗಸ್ ಆಗಿದೆ. ಇದರಿಂದ ನಿರುದ್ಯೋಗಿಗಳಿಗೆ ಯಾವುದೇ ಪ್ರಯೋಜನವಾಗಿಲ್ಲ, ಬದಲಾಗಿ ಇನ್ನಷ್ಟು ಸಾಲಗಾ ರರನ್ನಾಗಿ ಮಾಡಿದೆ ಎಂದು ದೂರಲಾಯಿತು.

ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಝಾಕ್ ಪಾಲೇರಿ ಸಹಿತ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಸೇರಿ ವಿವಿಧ ರಾಜ್ಯಗಳಿಂದ 11 ಮಂದಿ ಸದಸ್ಯರು ಭಾಗವಹಿಸಿದ್ದರು.