ಉತ್ತರ ಪ್ರದೇಶ: ಗ್ಯಾಂಗ್ ರೇಪ್ ಸಂತ್ರಸ್ತೆಯನ್ನೇ ಅತ್ಯಾಚಾರಗೈದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್…!

0
1371

ಸನ್ಮಾರ್ಗ ವಾರ್ತೆ

ಉತ್ತರ ಪ್ರದೇಶ: ಗ್ಯಾಂಗ್ ರೇಪ್ ಸಂತ್ರಸ್ತೆಯನ್ನೇ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರಗೆಯ್ದ ಘಟನೆ ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಇಲ್ಲಿನ ಶಹಜಾನ್ ಪುರದಲ್ಲಿ 35 ವರ್ಷದ ಮಹಿಳೆಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಐವರು ಪುರುಷರಿದ್ದ ಕಾರೊಂದು ತನ್ನನ್ನು ಕಾರಿನಲ್ಲಿ ಅಪಹರಿಸಿ ಗದ್ದೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರಗೈದಿದ್ದು, ಈ ಸಂಬಂಧ ಸಂತ್ರಸ್ತೆ ದೂರು ದಾಖಲಿಸಲು ಜಲಾಲಾಬಾದ್ ಪೊಲೀಸ್ ಠಾಣೆಗೆ ತೆರಳಿದ್ದಳು. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತನ್ನ ಕೋಣೆಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿರುವುದಾಗಿ ವರದಿಯಾಗಿದೆ.

ಮಹಿಳೆಯು ಈ ಬಗ್ಗೆ ಎಡಿಜಿ ಅವಿನಾಶ್ ಚಂದ್ರ ಅವರನ್ನು ಭೇಟಿಯಾಗಿ ದೂರು ನೀಡಿದ್ದು, ದೂರಿನ ವಿಚಾರಣೆಗೆ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.