ಗೃಹ ಸಚಿವ ಅಮಿತ್ ಶಾ ರಿಗೆ‌ ಕೊರೋನ ದೃಢ

0
378

ಸನ್ಮಾರ್ಗ ವಾರ್ತೆ

ನವದೆಹಲಿ,ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೊರೋನ ವರದಿಯು ಪಾಸಿಟಿವ್ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸ್ವತಃ ಟ್ವೀಟ್ ಮಾಡಿದ ಶಾ‌ ರವರು ಸೋಂಕಿಗೆ ಒಳಗಾಗುವ ಬಗ್ಗೆ ಮಾಹಿತಿ ನೀಡಿದರು.

ನನ್ನ ಆರೋಗ್ಯ ಚೆನ್ನಾಗಿದೆ, ಆದರೆ ವೈದ್ಯರ ಸಲಹೆಯ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಯಾರೆಲ್ಲ ಸಂಪರ್ಕಕ್ಕೆ ಬಂದಿದ್ದರೋ ಅವರೆಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದು, ಅಮಿತ್ ಶಾ ಶೀಘ್ರವಾಗಿ ಆರೋಗ್ಯವಂತರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.