ಜಾರ್ಖಂಡ್: ಟ್ಯೂಶನ್ ತೆರಳುತ್ತಿದ್ದ 5 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ

0
362

ಸನ್ಮಾರ್ಗ ವಾರ್ತೆ

ರಾಂಚಿ,ಅ.17: ಟ್ಯೂಶನ್‍ಗೆ ತೆರಳುವ ವೇಳೆ 5ನೇ ಕ್ಲಾಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಜಾರ್ಖಂಡಿನ ಧುಂಕ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಚಿದಿ ಗ್ರಾಮದ ನಿರ್ಜನ ಸ್ಥಳದಲ್ಲಿ 12 ವರ್ಷದ ಬಾಲಕಿಯ ಮೃತಹೇಹ ಪತ್ತೆಯಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ತನಿಖೆಗೆ ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಗುರಿಪಡಿಸಿ ಕೊಲೆ ಮಾಡಿರುವುದು ಕಂಡು ಬಂದಿದೆ ಹೆಚ್ಚಿನ ವಿವರಗಳು ಮರಣೋತ್ತರ ಪರೀಕ್ಷೆಯ ಬಳಿಕ ಸ್ಪಷ್ಟವಾಗಬಹುದೆಂದು ಪೊಲೀಸ್ ಸೂಪರಿಂಟೆಂಡೆಂಟ್ ತಿಳಿಸಿದ್ದಾರೆ.

ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಅವರು ಹೇಳಿದರು. ನವೆಂಬರ್ ಮೂರರಂದು ಧುಂಕ ವಿಧಾನಸಭೆಗೆ ಉಪಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here