ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೋನ

0
56

ಸನ್ಮಾರ್ಗ ವಾರ್ತೆ

ಬೆಂಗಳೂರು,ಸೆ.16: ರಾಜ್ಯದ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿಯವರಿಗೆ ಕೊರೋನ ಸೋಂಕು ತಗಲಿದ್ದು ದೃಢಪಟ್ಟಿದೆ. ಅವರು ತನ್ನ ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದಾರೆ. ರೋಗ ಲಕ್ಷಣಗಳು ವ್ಯಕ್ತವಾಗಿಲ್ಲ ಎಂದು ಅವರೇ ಟ್ವೀಟ್ ಮಾಡಿ ತಿಳಿಸಿದರು.

ಬಸವರಾಜರವರ ವಸತಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊರೋನ ಪಾಸಿಟಿವ್ ಆಗಿದ್ದರು. ನಂತರ ಸಚಿವರನ್ನು ಪರೀಕ್ಷೆಗೊಳಪಡಿಸಲಾಗಿತ್ತು.

ಇತ್ತೀಚೆಗೆ ತನ್ನ ಸಂಪರ್ಕದಲ್ಲಿದವರು ಕೊರೋನ ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸಬೇಕೆಂದು ಬಸವರಾಜ ಬೊಮ್ಮಾಯಿ ಟ್ವೀಟ್‍ನಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ 4.68 ಲಕ್ಷ ಮಂದಿಗೆ ಕೊರೋನ ದೃಢಪಟ್ಟಿದೆ. 7,384 ಮಂದಿ ಮೃತಪಟ್ಟಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.

LEAVE A REPLY

Please enter your comment!
Please enter your name here