ಕಾಂಗ್ರೆಸ್‌ಗೆ ಖುಶ್ಬು ರಾಜೀನಾಮೆ: ಬಿಜೆಪಿ ಸೇರ್ಪಡೆಗೊಳ್ಳುವುದಾಗಿ ಹೇಳಿಕೆ

0
724

ಸನ್ಮಾರ್ಗ ವಾರ್ತೆ

ಚೆನ್ನೈ,ಅ.12: ಬಿಜೆಪಿ ಸೇರುವುದಕ್ಕಾಗಿ ನಟಿ ಖುಶ್ಬು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷದ ವಕ್ತಾರ ಸ್ಥಾನದಿಂದ ತೆರವುಗೊಳಿಸಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತನ್ನ ರಾಜೀನಾಮೆ ಪತ್ರವನ್ನು ಕಳುಹಿಸಿದ ನಂತರ ಕಾಂಗ್ರೆಸ್‌ಗೆ ತಾನು ರಾಜೀನಾಮೆ ನೀಡಿದ ವಿವರವನ್ನು ನಟಿ ಖುಶ್ಬು ಬಹಿರಂಗಪಡಿಸಿದ್ದಾರೆ.

ತಾನು ಬಿಜೆಪಿಗೆ ಸೇರ್ಪಡೆಗೊಳ್ಳಲು ಬಯಸಿದ್ದೇನೆ ಎಂದು ಖುಶ್ಬು ರಾಷ್ಟ್ರೀಯ ಮಾಧ್ಯಮಗಳ ಜೊತೆ ಮಾತಾಡುತ್ತಾ ಹೇಳಿದರು. ಬಿಜೆಪಿಯ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲು ಅವರು ದಿಲ್ಲಿಗೆ ತೆರಳಿದ್ದು ಇಂದು ಬೆಳಿಗ್ಗೆ ಬಿಜೆಪಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬಳಿಕ ಅವರ ಬಿಜೆಪಿ ಸೇರ್ಪಡೆಯ ಕುರಿತು ಅಧಿಕೃತ ಘೋಷಣೆ ನಡೆಯಲಿದೆ ಎನ್ನಲಾಗುತ್ತಿದೆ.