ಜ.31 ರವರೆಗೆ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಿಸಿದ ಮಹಾರಾಷ್ಟ್ರ ಸರ್ಕಾರ

0
134

ಸನ್ಮಾರ್ಗ ವಾರ್ತೆ

ಮಹಾರಾಷ್ಟ್ರ: ಕೋರೋಣ ರೋಗವು ಮತ್ತಷ್ಟು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ 2021 ರ ಜನವರಿ 31 ರವರೆಗೆ ರಾಜ್ಯದಲ್ಲಿ ಕೋವಿಡ್-19 ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಘೋಷಿಸಿದೆ.

ಈಗಾಗಲೇ ಕಾಲಕಾಲಕ್ಕೆ ಅನುಮತಿಸಲಾದ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಮತ್ತು ಹಿಂದಿನ ಎಲ್ಲಾ ಆದೇಶಗಳನ್ನು ಈ ಆದೇಶದೊಂದಿಗೆ ಹೊಂದಿಸಲಾಗುವುದು ಮತ್ತು ಅದು 31 ಜನವರಿ 2021 ರವರೆಗೆ ಜಾರಿಯಲ್ಲಿರುತ್ತದೆ ಎಂದು ಮಹಾರಾಷ್ಟ್ರ ಸರಕಾರವು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.