ದಿಲ್ಲಿ: ಏಮ್ಸ್ ವಿದ್ಯಾರ್ಥಿ ಆತ್ಮಹತ್ಯೆ

0
147

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ,ಆ.11: ದಿಲ್ಲಿ ಏಮ್ಸ್‌ನ ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್ ಕಟ್ಟದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರ ಸಂಜೆ ಆರು ಗಂಟೆಗೆ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಈತನನ್ನು ತುರ್ತು ಉಪಚಾರ ವಿಭಾಗಕ್ಕೆ ದಾಖಲಿಸಿದರೂ ಜೀವ ರಕ್ಷಿಸಲು ಸಾಧ್ಯವಾಗಿಲ್ಲ. ಮೃತನನ್ನು ಬೆಂಗಳೂರಿನ ವಿಕಾಸ್ ಎಂದು ಗುರುತಿಸಲಾಗಿದೆ.

ಯುವಕ 2018ರ ಬ್ಯಾಚ್ ವಿದ್ಯಾರ್ಥಿಯಾಗಿದ್ದಾನೆ. ಏಮ್ಸ್‌ನಲ್ಲಿ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಮನೋರೋಗ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಕಾಸ್ ಹಾಸ್ಟೆಲ್‍ಗೆ ಬಂದು ಹತ್ತನೆ ಮಹಡಿಯಿಂದ ಕೆಳಗೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.