ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿಗೆ ಜಾಮೀನು ನಿರಾಕರಣೆ

0
320

ಸನ್ಮಾರ್ಗ ವಾರ್ತೆ

ಭೋಪಾಲ್: ಸ್ಟ್ಯಾಂಡ್ ಅಪ್ ಕಾಮಿಡಿಯ ಶೋ ನ ವೇಳೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿರುವ ಆರೋಪದಲ್ಲಿ ಬಂಧಿತನಾಗಿರುವ ಕಾಮಿಡಿಯನ್ ಮುನವ್ವರ್ ಫಾರೂಕಿಗೆ ಅವರ ಜಾಮೀನು ಕೋರಿಕೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಫಾರೂಕಿ ಮತ್ತು ಅವರ ಸಹಾಯಕ ನಲಿನ್ ಯಾದವ್ ಅವರ ಪ್ರದರ್ಶನದಲ್ಲಿ ಧಾರ್ಮಿಕ ಭಾವನೆಗಳನ್ನು ನೋಯಿಸಿದ ಆರೋಪದ ಮೇಲೆ ಜನವರಿ 2 ರಂದು ಬಂಧಿಸಲಾಗಿತ್ತು. .

ಕಾರ್ಯಕ್ರಮವೊಂದರಲ್ಲಿ ಮುನವ್ವರ್ ಫಾರೂಕಿ ಹಿಂದೂ ದೇವತೆಗಳ ಬಗ್ಗೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕರೊಬ್ಬರ ಮಗ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 2 ರಂದು ಬಂಧಿಸಲಾಗಿತ್ತು. ಬಳಿಕ ಸ್ಥಳೀಯ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಪ್ರಕರಣದ ದಿನಚರಿಯನ್ನು ತಯಾರಿಸಲು ಪೊಲೀಸರು ವಿಫಲವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಫಾರೂಕಿ ಮತ್ತು ಇತರ ನಾಲ್ಕು ಬಂಧಿತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಗಳ ಜಾಮೀನು ಅರ್ಜಿಯನ್ನು ಈಗಾಗಲೇ ಕೆಳ ನ್ಯಾಯಾಲಯಗಳು ತಿರಸ್ಕರಿಸಿದೆ.