ಬಿಹಾರದಲ್ಲಿ ಪ್ರಧಾನಿಯಿಂದ 12 ಚುನಾವಣಾ ರ್ಯಾಲಿ

0
335

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ,ಅ.16: ಬಿಹಾರದ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ 12 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್ 13ಕ್ಕೆ ಸಸರಾಂ, ಗಯ, ಭಾಗಲ್ಪುರಗಳಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಅಕ್ಟೋಬರ್ 28ಕ್ಕೆ ದರ್ಭಾಂಗ, ಮುಝಫರ್‍ಪುರ್, ಪಾಟ್ನಗಳಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸುವರು. ಬಿಜೆಪಿ ನಾಯಕ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಬಿಜೆಪಿಯ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದಾರೆ.