ಪ.ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ- ಗೃಹ ಸಚಿವ ಅಮಿತ್ ಶಾ

0
378

ಸನ್ಮಾರ್ಗ ವಾರ್ತೆ

ಕೊಲ್ಕತಾ,ನ.6: ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ ವಿರುದ್ಧ ಜನರ ರೋಷ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಎರಡು ದಿನಗಳ ಪಶ್ಚಿಮ ಬಂಗಾಳ ಭೇಟಿಗೆ ಅವರು ಬಂದಿದ್ದಾರೆ. ತೃಣಮೂಲದ ಮರಣ ಮೃದಂಗ ಮೊಳಗಿದೆ. ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆ ಮೂಲಕ ಸುವರ್ಣ ಪಶ್ಚಿಮ ಬಂಗಾಳದ ಕನಸು ನಿಜವಾಗಲಿದೆ ಎಂದು ಅವರು ಹೇಳಿದ್ದಾರೆ.

ಮೂರರಲ್ಲಿ ಎರಡು ಬಹುಮತದೊಂದಿಗೆ ಬಿಜೆಪಿಗೆ ಸರಕಾರ ರಚಿಸಲು ಸಾಧ್ಯ. ನರೇಂದ್ರ ಮೋದಿ ನೇತೃತ್ವದಲಿ ರಾಜ್ಯದಲ್ಲಿ ಭಾರೀ ಬದಲಾವಣೆ ತರಲಾಗುವುದು ಎಂದು ಅಮಿತ್ ಶಾ ಹೇಳಿದರು. ಬಡವರ ಪ್ರಧಾನಿಯ ಯೋಜನೆಯನ್ನು ತಡೆಯುವ ಮೂಲಕ ಬಿಜೆಪಿಯನ್ನು ತಡೆದು ನಿಲ್ಲಿಸಬಹುದೆಂದು ಮಮತಾ ತಿಳಿದಿದ್ದಾರೆ ಎಂದು ಅವರು ಹೇಳಿದರು.

2021ರ ಎಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಬಿಜೆಪಿ ರಾಜ್ಯ ಘಟಕದಲ್ಲಿ ಬದಲಾವಣೆಯ ನಿಟ್ಟಿನಲ್ಲಿ ಅಮಿತ್ ಶಾ ಪಶ್ಚಿಮ ಬಂಗಾಳ ಸಂದರ್ಶಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಉತ್ತಮ ಸಾಧನೆ ಮಾಡಿತ್ತು. 42 ಸೀಟುಗಳಲ್ಲಿ 18 ಸಿಟುಗಳನ್ನು ಗೆದ್ದಿತ್ತು. 2014ರಲ್ಲಿ ಬಿಜೆಪಿಗೆ ಇಲ್ಲಿ ಕೇವಲ 2 ಸೀಟುಗಳಿದ್ದವು.