ದ ಕ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶನಿವಾರ ಶಾಲಾ- ಕಾಲೇಜುಗಳಿಗೆ ರಜೆ

0
347

ಸನ್ಮಾರ್ಗ ಜು. 19, 2019

ಮಂಗಳೂರು, : ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸೂಚನೆಯಿದ್ದು, ಜು 20 ರ ಶನಿವಾರದಂದು ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಈ ರಜೆ ಪದವಿ ಪೂರ್ವ ತರಗತಿವರೆಗೆ (PUC) ಅನ್ವಯಿಸುತ್ತದೆ.

ರೆಡ್‌ ಆಲರ್ಟ್‌ ಘೋಷಣೆ ಆಗಿರುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಇದಲ್ಲದೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು ಎಚ್ಚರ ವಹಿಸುವಂತೆ ಹಾಗೂ ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಖಾಸಗಿಯ ಪದವಿ ಪೂರ್ವ ಎಲ್ಲಾ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸುವಂತೆ ಆದೇಶಿಸಿದ್ದಾರೆ.