ರಾಜ್ಯ ಮಟ್ಟದ ‘ವಿಜ್ಞಾನ ಸಾಹಿತ್ಯ’ ಕಮ್ಮಟ: ಅರ್ಜಿ ಆಹ್ವಾನ

0
86

ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರು ಇವರ ಸಹಯೋಗದೊಂದಿಗೆ “ವಿಜ್ಞಾನ ಸಾಹಿತ್ಯ” ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಫೆಬ್ರವರಿ 19 ರಿಂದ 21ರ ವರೆಗೆ ಪಿಲಿಕುಳದಲ್ಲಿ ನಡೆಸಲಿದ್ದಾರೆ. ಅರ್ಹ ಅಭ್ಯರ್ಥಿಗಳು ಜನವರಿ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org, ದೂ.ಸಂಖ್ಯೆ: 080-22211730, 22106460 ಅಥವಾ ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.