ಆಹಾರ, ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೃಷಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ: ವೆಲ್ಫೇರ್ ಪಾರ್ಟಿಯಿಂದ ರೈತರ ಹೋರಾಟಕ್ಕೆ ಬೆಂಬಲ

0
151

ಸನ್ಮಾರ್ಗ ವಾರ್ತೆ

ಬೆಂಗಳೂರು:’ಕೃಷಿ ಕ್ಷೇತ್ರದ ಸುಧಾರಣೆಯ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ಮಸೂದೆಗಳು ಆಹಾರ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸಲಿವೆ. ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಮೂರು ಕೃಷಿ ಸಂಬಂಧಿತ ಸುಧಾರಣಾ ಮಸೂದೆಗಳನ್ನು ಹಿಂಪಡೆಯಬೇಕು ಎಂಬ ರೈತರ ನಿಲುವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಬೆಂಬಲಿಸಿದೆ. ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಸರ್ಕಾರಕ್ಕೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಧ್ಯಕ್ಷರು ಅಡ್ವೊಕೇಟೆ ಹುಸೇನ್ ಒತ್ತಾಯಿಸಿದರು.

ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಯ ದುರುದ್ದೇಶ. ಕೃಷಿ ಮಾರುಕಟ್ಟೆ ಮೇಲಿನ ಸರ್ಕಾರದ ನಿಯಂತ್ರಣವನ್ನು ಬಿಟ್ಟುಕೊಟ್ಟು ಎಪಿಎಂಸಿಗಳನ್ನು ಖಾಸಗಿ ಧಣಿಗಳ ಪಾದಕ್ಕೊಪ್ಪಿಸಿ ರೈತರನ್ನು ಅವರ ಜೀತದಾಳುಗಳನ್ನಾಗಿ ಮಾಡಲು ಹೊರಟಿರುವ ಬಿಜೆಪಿ ಸರ್ಕಾರದ ಹುನ್ನಾರಗಳನ್ನು ರೈತರು ಅರಿತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಬೆಳೆ ಉತ್ಪಾದನಾ ವೆಚ್ಚಕ್ಕೆ ತಕ್ಕ ಬೆಲೆ ಸಿಗದಿರುವುದೇ ಕೃಷಿ ಕ್ಷೇತ್ರದ ಮೂಲ ಸಮಸ್ಯೆ. ಇದಕ್ಕಾಗಿಯೇ ಬೆಂಬಲ ಬೆಲೆಯನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ತಿದ್ದುಪಡಿ ಕಾನೂನಿನಲ್ಲಿ ಬೆಂಬಲ ಬೆಲೆಯ ರಕ್ಷಣೆಯನ್ನು ಕಿತ್ತೊಗೆದು ರೈತರನ್ನು ಅನಾಥರನ್ನಾಗಿ ಮಾಡಲಾಗಿದೆ. ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ. ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ. ಇದು ಸರ್ಕಾರದ ಸಂಪೂರ್ಣ ಶರಣಾಗತಿಯಾಗಿದೆ ಆದರೆ ಮೋದಿ ಸರ್ಕಾರವು ಕಾರ್ಪೊರೇಟ್‌ ಹಾಗೂ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ’ಈ ಮಸೂದೆಗಳು ರೈತ ವಿರೋಧಿ ಹಾಗೂ ಕಾರ್ಪೋರೇಟ್​ ಪರ ಮಸೂದೆಗಳಾಗಿವೆ, ಆಹಾರ ಭದ್ರತಾ ವ್ಯವಸ್ಥೆಗಳನ್ನ ದುರ್ಬಲಗೊಳಿಸುತ್ತವೆ ಎಂದು ವಿರೋಧ ವ್ಯಕ್ತಪಡಿಸಿದರು.