ಟಿಪ್ಪುವನ್ನುಹಾಡಿಹೊಗಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

0
1701

ಬೆಂಗಳೂರು: ವಿಧಾನ ಸೌಧದ ವಜ್ರಮಹೋತ್ಸವ ಸಮಾರಂಭದಲ್ಲಿ ಇಂದು ಭಾಗವಹಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶದ ಪ್ರಗತಿಗೆ ಕರ್ನಾಟಕದ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

ಸಾಮಾಜಿಕ, ಆರ್ಥಿಕ, ರಾಜಕೀಯ, ವ್ಯಾಪಾರ, ತಂತ್ರಜ್ಞಾನ  ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕದ ಕೊಡುಗೆ ಅಪಾರವೆಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಕ್ಕೂ ಬಹಳಷ್ಟು ಮಹನೀಯರನ್ನು  ಕರ್ನಾಟಕ ನೀಡಿದೆ ಎಂದ ಕೋವಿಂದ್, ಬ್ರಿಟಿಷರ ವಿರುದ್ಧ ಹೋರಾಡುತ್ತಾ ಯುದ್ಧ ಭೂಮಿಯಲ್ಲಿ ಟಿಪ್ಪು ಸುಲ್ತಾನ್ ಹುತಾತ್ಮರಾಗಿದ್ದರೆ. ರಾಕೆಟ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಬಳಸುವುದರಲ್ಲೂ ಅವರು ಮೊದಲಿಗರು ಎಂದು ಕೋವಿಂದ್ ಟಿಪ್ಪುವನ್ನು ತಮ್ಮ ಭಾಷಣದಲ್ಲಿ ಹಾಡಿಹೊಗಳಿದ್ದರೆ.
ಆ ಸಂದರ್ಭದಲ್ಲಿ ಶಾಸಕರು ಮೇಜು ಕುಟ್ಟಿ ಭಾಷಣವನ್ನು ಸ್ವಾಗತಿಸಿದ್ದಾರೆ.

ಆಂಗ್ಲ ಭಾಷೆಯಲ್ಲೇ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಯವರು, ವಜ್ರಮಹೋತ್ಸವದಲ್ಲಿ ಭಾಗವಹಿಸುತ್ತಿರುವುದು ಜೀವನದ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಹೇಳಿದರು.

ವಿಧಾನಸೌಧ ಕರ್ನಾಟಕದ ಹೆಗ್ಗುರುತು, ಕರ್ನಾಟಕದ ಕನಸೇ ಭಾರತದ ಕನಸು, ಕರುನಾಡಿನ ಉಜ್ವಲ ಭವಿಷ್ಯಕ್ಕಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆನೀಡಿದರು.

ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿನೀಡಿರುವ ಕೋವಿಂದ್, ಸೌಧದ ವಜ್ರಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ  ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.