ನಾನು ಬಿಜೆಪಿ ಸೇರಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ಹೊಡೆದು, ಚಿತ್ರಹಿಂಸೆ; ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪ

0
174

ಸನ್ಮಾರ್ಗ ವಾರ್ತೆ

ಬಿಜೆಪಿ ಸೇರಲು ಮತ್ತು ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು, ಚಿತ್ರಹಿಂಸೆ ನೀಡಲಾಯಿತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಹೇಳಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್‌ ಅವರೊಂದಿಗೆ ತಮ್ಮ ನೋವನ್ನು ಹಂಚಿಕೊಂಡಿರುವ ಸಾಕೇತ್ ಗೋಖಲೆ, ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ್ಟಗಳ ಬಗ್ಗೆ ವಿವರಿಸಿದ್ದಾರೆ. ಜೊತೆಗೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಅಡಳಿತದಲ್ಲಿ ವಿಪಕ್ಷಗಳ ನಾಯಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಬಿಚ್ಚಿಟ್ಟಿದ್ದಾರೆ.

ಇಂತಹ ಹಿಂಸೆಗಳು ನನಗೆ ಮಾತ್ರವಲ್ಲ ಅಥವಾ ನಾನೊಂದು ನಿದರ್ಶನವೂ ಅಲ್ಲ. ಆದರೆ, ಭಾರತೀಯ ರಾಜಕೀಯದಲ್ಲಿ ಹೆಚ್ಚುತ್ತಿರುವ ಸರ್ವಾಧಿಕಾರದ ಲಕ್ಷಣವನ್ನು ನಾನು ಎದುರಿಸಿದ ಸಂಕಷ್ಟಗಳು ಎತ್ತಿ ತೋರಿಸುತ್ತವೆ” ಎಂದಿದ್ದಾರೆ.

ಕ್ರೌಡ್ ಫಂಡ್ ಮಾಡಿದ ಹಣವನ್ನು ವೈಯಕ್ತಿಕ ಬಳಕೆಗಾಗಿ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಗೋಖಲೆ ಅವರನ್ನು ಬಂಧಿಸಿ, ಜೈಲಿನಲ್ಲಿರಿಸಲಾಗಿತ್ತು.

LEAVE A REPLY

Please enter your comment!
Please enter your name here