ಬಡಿಗೆ ಕೊಟ್ಟು ಯಾಕೆ ಪೆಟ್ಟು ತಿನ್ನುತ್ತೀರಿ: ಬಿಜೆಪಿಗೆ ಸಿದ್ದರಾಮಯ್ಯ ಟಾಂಗ್

0
222

ಸನ್ಮಾರ್ಗ ವಾರ್ತೆ

ಬಿಜೆಪಿ ನಾಯಕರೇ , ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಹೊಡೆಸಿಕೊಳ್ಳುತ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ನಡುವೆ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯರು ಹೇಳಿಕೆ ನೀಡಲು ಮುಂದೆ ಬರುತ್ತಿದ್ದು ಈ ವರೆಗೆ ಒಂಬತ್ತು ಮಂದಿ ಸಂತ್ರಸ್ತೆಯರು ಸಿಟ್ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಸರಕಾರ ಹೊಸಕೋಟೆಯ ಅಭಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆ ಬಡಿದುಕೊಳ್ತೀರಲ್ಲ, ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 22ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ತಾಣದಲ್ಲಿ ಸಿದ್ದರಾಮಯ್ಯ ಪ್ರಶ್ನೆಸಿದ್ದಾರೆ.

2020ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಂತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2020ರಲ್ಲಿ ಬಿಜೆಪಿ ಸರಕಾರ ಮತ್ತೆ ಈ ಸಮಿತಿಗೆ ಆಫ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು ಎಂದು ಸಿದ್ದರಾಮಯ್ಯ ಬರೆದಿದ್ದಾರೆ.

LEAVE A REPLY

Please enter your comment!
Please enter your name here