ಕಾಂಗ್ರೆಸ್‍ನಿಂದ ರಾಮಮಂದಿರ: ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್

0
1822

ಡೆಹ್ರಾಡೂನ್,ಫೆ.23: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಶುಕ್ರವಾರ ಹೇಳಿದರು.

“ಹಿಂದಿನ ಎರಡು ಸಂದರ್ಭಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಮಮಂದಿರ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿತ್ತು. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಮಮಂದಿ ಕಟ್ಟಲು ಪ್ರಾಮಾಣಿಕವಾಗಿ ಯತ್ನಿಸುತ್ತೇವೆ” ಎಂದು ರಾವತ್ ಪತ್ರಕರ್ತರಿಗೆ ತಿಳಿಸಿದರು.

ಇದು ಪಕ್ಷದ ಅಧಿಕೃತ ನಿಲುವಾಗಿದೆಯೇ ಎಂದು ಪ್ರಶ್ನಿಸಿದಾಗ ರಾವತ್ ನಸುನಕ್ಕು “ನನ್ನ ರಾಮ ಮಂದಿರ ಕುರಿತ ಹೇಳಿಕೆ ಮಾಧ್ಯಮದಲ್ಲಿ ವರದಿಯಾಗಿವೆ. ಕಾಂಗ್ರೆಸ್ ಅದನ್ನು ತಿರಸ್ಕರಿಸಿಲ್ಲ ಎಂದು ಉತ್ತರಿಸಿದರು.

ಭಾರತೀಯ ಜನತಾ ಪಾರ್ಟಿ ರಾಮಮಂದಿರ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ ಅದು ರಾಮ ಮಂದಿರವನ್ನು ಚುನಾವಣಾ ವಿಷಯವನ್ನಾಗಿ ಮಾಡುತ್ತಿದೆ. ಸರಕಾರ ರಾಮಮಂದಿರ ನಿರ್ಮಾಣಕ್ಕೆ ಅನುಕೂಲಕರವಾಗಿ ಕೆಲಸ ಮಾಡಬೇಕೆಂದು ಅವರು ಹೇಳಿದರು. ಪುಲ್ವಾಮ ಭಯೋತ್ಪಾದನಾ ದಾಳಿಯ ಕುರಿತು ಪ್ರಸ್ತಾಪಿಸಿದ ಅವರು ಬಿಜೆಪಿ ಕೇವಲ ಮೋದಿಯೊಬ್ಬರೇ ರಾಷ್ಟ್ರವಾದಿ ಎಂಬಂತೆ ಬಿಂಬಿಸುತ್ತಿದೆ. ಆದರೆ ನಾನು ಈ ವಾದವನ್ನು ಬಲವಾಗಿ ವಿರೋಧಿಸುತ್ತೇನೆ. “ನಾವೆಲ್ಲರೂ ರಾಷ್ಟ್ರೀಯವಾದಿಗಳೇ. ಮತ್ತು ಪ್ರತಿಯೊಬ್ಬ ಭಾರತೀಯನೂ ರಾಷ್ಟ್ರವಾದಿಯಾಗಿದ್ದಾನೆ” ಎಂದು ಹೇಳಿದರು.