ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ‌್ಯಾಗಿಂಗ್; 18 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲು

0
459

ಸನ್ಮಾರ್ಗ ವಾರ್ತೆ

ಮಂಗಳೂರು: ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ಟಿಟ್ಯೂಟ್ ಸಂಸ್ಥೆಯ ಬಿಪಿಟಿ(ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ‌್ಯಾಗಿಂಗ್ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ 18 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದಾಗಿ ಪೊಲೀಸರು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್‌ಗೆ ತಿಳಿಸಿದ್ದಾರೆ.

ಬಿಪಿಟಿ ವಿಭಾಗದ ಪ್ರಥಮ ವರ್ಷದ 5 ವಿದ್ಯಾರ್ಥಿಗಳ ಮೇಲೆ 18 ಮಂದಿ ಹಿರಿಯ ವಿದ್ಯಾರ್ಥಿಗಳು ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು. ಫೆ.4 ರಂದು ಘಟನೆ ನಡೆಸಿದ್ದು, ಫೆ.8ರಂದು ಠಾಣೆಯಲ್ಲಿ ದೂರು ದಾಖಲಾಗಿದ್ದು, ರ‌್ಯಾಗಿಮನಗ್ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕಾಲೇಜಿನ ಆಡಳಿತ ಮಂಡಳಿಯು ಶಿಸ್ತು ಕ್ರಮ ಕೈಗೊಂಡಿದೆ ಎಂಬುದಾಗಿ ತಿಳಿದು ಬಂದಿದೆ.

ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಮ್ಮ ತರಗತಿ ಕೋಣೆಗೆ ಕಿರಿಯ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಕರೆಸಿಕೊಂಡಿದ್ದು, ಈ ವೇಳೆ ತಮ್ಮೆದುರು ತಲೆ ತಗ್ಗಿಸಿ ನಿಲ್ಲಬೇಕೆಂದು ಬೆದರಿಕೆ ಹಾಕಿದ್ದರಲ್ಲದೇ ತಮ್ಮನ್ನು ಗುರಿಯಾಗಿಸಿ ತಳ್ಳಾಟ ನಡೆಸಿದ್ದರು ಎಂದು ಕಿರಿಯ ವಿದ್ಯಾರ್ಥಿಗಳು ದೂರಿನಲ್ಲಿ ಹೇಳಿದ್ದಾರೆಂದು ವರದಿಗಳು ತಿಳಿಸಿವೆ.