ನ್ಯಾಯಾಂಗ ನಿಂದೆ ಪ್ರಕರಣ: ಪ್ರಶಾಂತ್ ಭೂಷಣ್‌ಗೆ 1 ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

0
600

ಸನ್ಮಾರ್ಗ ವಾರ್ತೆ

ನವದೆಹಲಿ,ಆ.31: ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು ಟೀಕಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ 1 ರೂ. ದಂಡವನ್ನು ವಿಧಿಸಿದೆ.

ಭೂಷಣ್ ಸೆಪ್ಟೆಂಬರ್ 15ರ ಒಳಗೆ ದಂಡವನ್ನು ಕಟ್ಟದಿದ್ದರೆ ಅವರನ್ನು 3 ತಿಂಗಳು ಜೈಲು ಶಿಕ್ಷೆಗೆ ಒಳಪಡಿಸುವ ಮತ್ತು 3 ವರ್ಷಗಳವರೆಗೆ ಪ್ರಾಕ್ಟೀಸ್‌ನ್ನು ನಿಷೇಧಿಸುವ ಆಜ್ಞೆಯನ್ನು ನ್ಯಾಯಾಲಯ ನೀಡಿದೆ.

ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಸಾಧ್ಯವಿಲ್ಲ, ಆದರೆ ಇತರರ ಹಕ್ಕುಗಳನ್ನು ಗೌರವಿಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.