ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ

0
1949

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್​ ಕುಮಾರ್(59)​ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಿಜೆಪಿಯ ನಾಯಕರಾಗಿದ್ದ ಅನಂತ್ ಕುಮಾರ್, ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಕೇಂದ್ರ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದರು.

1996 ರಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾ ಬಂದಿದ್ದರು.
ಪತ್ನಿ ತೇಜಸ್ವಿನಿ, ಪುತ್ರಿಯರಾದ ಐಶ್ವರ್ಯಾ ಹಾಗೂ ವಿಜೇತ ಸೇರಿದಂತೆ ಬಂಧುಗಳು, ರಾಜಕೀಯ ಅಭಿಮಾನಿಗಳನ್ನು ಅಗಲಿದ್ದಾರೆ‌.