ದೇಶದಲ್ಲಿ 24 ವಿಶ್ವವಿದ್ಯಾನಿಲಯಗಳು ‘ನಕಲಿ’ ಎಂದು ಘೋಷಿಸಿದ ಯುಜಿಸಿ

0
509

ಸನ್ಮಾರ್ಗ ವಾರ್ತೆ

ನವದೆಹಲಿ: ದೇಶದಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರಿಂದ ಮತ್ತು ಎಲೆಕ್ಟ್ರಾನಿಕ್ ಪ್ರಿಂಟ್ ಮಿಡಿಯಾಗಳಿಂದ ದೂರುಗಳು ಬಂದ ಕಾರಣ ಯುಜಿಸಿಯು ಸ್ವಯಂ ಘೋಷಿತ 24 ವಿಶ್ವವಿದ್ಯಾಲಯಗಳನ್ನು ನಕಲಿ ಎಂಬುದಾಗಿ ಸ್ಪಷ್ಟನೆ ನೀಡಿದೆ.

ಭಾರತೀಯ ಶಿಕ್ಷಾ ಪರಿಷದ್ ಲಕ್ಷ್ಮಿ, ಇಂಡಿಯನ್ ಇನ್ಸಿಟ್ಯೂಟ್ ಆಫ್ ಪ್ಲಾನಿಂಗ್ ಎಂಡ್ ಮ್ಯಾನೇಜ್‌ಮೆಂಟ್ ಕೂಡ ಯುಜಿಸಿ-1956 ನಿಯಮಾವಳಿಗಳನ್ನು ಗಾಳಿಗೆ ತೂರಿದೆ. ಆದರೆ ಅದಕ್ಕೆ ಸಂಬಂಧಿಸಿದ ವಿಚಾರ ನ್ಯಾಯಾಲಯದಲ್ಲಿದೆ ಎಂದು ಪ್ರಧಾನ್ ತಿಳಿಸಿದ್ದಾರೆ.

ನಕಲಿ ವಿಶ್ವವಿದ್ಯಾಲಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತಿದೆ. ಮೋಸ ಹೋಗದಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಅತೀ ಹೆಚ್ಚು ನಕಲಿ ವಿಶ್ವವಿದ್ಯಾನಿಲಯಗಳಿದ್ದು ಏಳು ನಕಲಿ ವಿವಿ‌ಗಳನ್ನು ಪತ್ತೆ ಹಚ್ಚಲಾಗಿದೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯ ಕಾರ್ಯಾಚರಿಸುತ್ತಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭೆಗೆ ತಿಳಿಸಿದ್ದಾರೆ.