ಮಧ್ಯಪ್ರದೇಶ: ಸಂಪುಟ ವಿಸ್ತರಣೆಯಲ್ಲಿ ಪಕ್ಷಾಂತರಿಗಳಿಗೆ ಸಿಂಹಪಾಲು; ಬಿಜೆಪಿಯೊಳಗೆ ಭುಗಿಲೆದ್ದ ಭಿನ್ನಮತ

0
414

ಸನ್ಮಾರ್ಗ ವಾರ್ತೆ

ಭೋಪಾಲ್,ಜು.3: ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರಕಾರ ಗುರುವಾರ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಪಕ್ಷಾಂತರವಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರೇ ಸಿಂಹಪಾಲು ನೀಡಿರುವುದು ಬಿಜೆಪಿಯೊಳಗೆ ಭಿನ್ನಮತಕ್ಕೆ ಕಾರಣವಾಗಿದೆ.

ಸಚಿವ ಸ್ಥಾನ ಆಕಾಂಕ್ಷಿಗಳಾದ ಹಲವು ಶಾಸಕರ ಬೆಂಬಲಿಗರು ರಾಜ್ಯದಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಯು ಕೇಳಿ ಬರುತ್ತಿದೆ.

ಈ ನಡುವೆ, ಪಕ್ಷದ ಹಿರಿಯ ನಾಯಕಿ ಉಮಾ ಭಾರತಿ ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ. ಶರ್ಮಾಗೆ ಪತ್ರ ಬರೆದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ ಚೌಹಾಣ್‌ರಿಗೆ ತಮ್ಮ ವಿಶ್ವಾಸಿಗಳಿಗೆ ಸಂಪುಟದಲ್ಲಿ ಸ್ಥನಾ ದೊರೆತಿಲ್ಲದೇ ಇರುವುದು ಬೇಸರವುಂಟು ಮಾಡಿದೆ ಎಂದು ಖೇದ ವ್ಯಕ್ತಪಡಿಸಿದ್ದರು.

ಈ ನಡುವೆ ವಿವಿಧ ನಾಯಕರ ಬೆಂಬಲಿಸಗರು ಬೀದಿಗಿಳಿದು ಪ್ರತಿಭಟಿಸುತ್ತಿದ್ದು, ತಮ್ಮ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.