ಅಕ್ರಮ ಚಿನ್ನ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು

0
952

ಸನ್ಮಾರ್ಗ ವಾರ್ತೆ

ಮಂಗಳೂರು: 26,43,840 ರೂ.ಗಳ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಯಾಣಿಕರಿಬ್ಬರೂ ಯುಎಇಯಿಂದ ಬಂದಿದ್ದರೆಂದು ವರದಿಯಾಗಿದೆ.

ಅಲ್ಲದೇ, ದುಬೈನಿಂದ ಬರುತ್ತಿದ್ದ ಮತ್ತೊಬ್ಬ ಪ್ರಯಾಣಿಕನನ್ನೂ ಕೂಡಾ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು 92,27,590 ರೂ.ಗಳ 1.9 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿದ್ದಕ್ಕಾಗಿ ಬಂಧಿಸಿರುವ ಬಗ್ಗೆ ತಿಳಿದು ಬಂದಿದೆ.