400ರಷ್ಟು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ: ಸೇನಾ ಮುಖ್ಯಸ್ಥ ನಾರವಾನೆ

0
388

ಸನ್ಮಾರ್ಗ ವಾರ್ತೆ

ನವದೆಹಲಿ: ಭಾರತದ ಕಡೆಯಿಂದ ನುಸುಳಲು ಪಾಕಿಸ್ತಾನ ಮೂಲದ ಸುಮಾರು 300 ರಿಂದ 400 ಭಯೋತ್ಪಾದಕರು ಲಾಂಚ್‌ಪ್ಯಾಡ್‌ಗಳಲ್ಲಿ ನಿಯಂತ್ರಣ ರೇಖೆ (ಎಲ್‌ಒಸಿ) ದಲ್ಲಿ ಕಾಯುತ್ತಿದ್ದಾರೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಹೇಳಿದ್ದಾರೆ.

ದೆಹಲಿಯಲ್ಲಿ ಸೇನಾ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, ಎಲ್‌ಒಸಿಯಲ್ಲಿ ನಿಯೋಜಿಸಲಾಗಿರುವ ಪಡೆಗಳು ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಸೂಕ್ತ ಉತ್ತರ ನೀಡುತ್ತಿವೆ. ಭಾರತೀಯ ಭದ್ರತಾ ಪಡೆಗಳು ಭಯೋತ್ಪಾದಕರ ಚಟುವಟಿಕೆಗಳ ಮೇಲೆ ನಿಗಾ ಇಡುತ್ತಿವೆ ಎಂದು ಹೇಳಿದರು.

ಎಲ್‌ಒಸಿಯಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಲ್ಲಿ ಶೇಕಡಾ 44 ರಷ್ಟು ಹೆಚ್ಚಳವಾಗಿದೆ. 2019 ರಲ್ಲಿ 3168 ಕದನ ವಿರಾಮ ಉಲ್ಲಂಘನೆ ನಡೆದಿತ್ತು. ಕುತೂಹಲಕಾರಿಯಾಗಿ, 3,168 ಕದನ ವಿರಾಮ ಉಲ್ಲಂಘನೆಗಳಲ್ಲಿ 1,551 ಆಗಸ್ಟ್‌ನಿಂದ ನಡೆದಿವೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಸರ್ಕಾರ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕದನ ವಿರಾಮ ಉಲ್ಲಂಘನೆಯಲ್ಲಿ ಏರಿಕೆ ಕಂಡುಬಂದಿದೆ ಎಂದು ಭದ್ರತಾ ಸಂಸ್ಥೆ ಗಮನಿಸಿದೆ ಎಂದು ಇದೇ ವೇಳೆ ತಿಳಿಸಿದರು.