ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದಲ್ಲಿ ಭಾಗಿಯಾದ ಬಿಜೆಪಿ,ಕಾಂಗ್ರೆಸ್ ಕಾರ್ಯಕರ್ತರು!

0
1023

ಮಂಡ್ಯ,ಎ.8: ಜನತಾ ದಳ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪಕ್ಷೇತರ ಅಭ್ಯರ್ಥಿ ದಿವಂಗತ ಕಾಂಗ್ರೆಸ್ ನಾಯಕ ನಟ ಅಂಬರೀಶ್ ಪತ್ನಿ ಸುಮಲತಾರ ಪರ ಪ್ರಚಾರ ನಡೆಸುತ್ತಿದ್ದಾರೆ.

ಕಾಂಗ್ರೆಸ್-ದಳ ಸಖ್ಯದ ಅಭ್ಯರ್ಥಿಯಾಗಿರುವ ನಿಖಿಲ್‍ರನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ಒಪ್ಪಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈಗ ಜನತಾದಳ ಸಂಸದರಿದ್ದಾರೆ. ಜನತಾದಳದ ಪ್ರಭಾವೀ ಕ್ಷೇತ್ರವಿದು. ಮೈತ್ರಿ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್ಸಿಗರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಆದರೆ ಈವರೆಗೂ ಕಾಂಗ್ರೆಸ್ ಯಾವುದೇ ಕ್ರಮವನ್ನು ಜರಗಿಸಿಲ್ಲ ಎಂದು ವರದಿಯಾಗಿದೆ.