ದೇಶದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 13,000; ಮೃತರ ಸಂಖ್ಯೆ 437

0
745

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ, ಎ.17: ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,000 ದಾಟಿದ್ದು 437 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 1,007 ಮಂದಿಗೆ ಹೊಸದಾಗಿ ರೋಗ ಹರಡಿದ್ದು ದೃಢೀಕರಣಗೊಂಡಿದೆ. ಒಟ್ಟು 13,387 ಮಂದಿಗೆ ಕೊರೊನಾ ರೋಗ ಹಬ್ಬಿದೆ.

ಕಳೆದ ಕೆಲವು ಗಂಟೆಗಳಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ಈಗ 11,201 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1, 749 ಮಂದಿ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಗುರುವಾರ 183 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.