ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಲೈಮಾನ್ ಕಲ್ಲರ್ಪೆ ಆಯ್ಕೆ

0
752

ಮಂಗಳೂರು: ವೆಲ್ಫೇರ್ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ನೂತನ ಜಿಲ್ಲಾಧ್ಯಕ್ಷರಾಗಿ ಸುಲೈಮಾನ್ ಕಲ್ಲರ್ಪೆ , ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೋಕೇಟ್ ಸರ್ಫರಾಝ್ , ಉಪಾಧ್ಯಕ್ಷರಾಗಿ ಎಸ್.ಎಂ.ಮುತ್ತಲಿಬ್, ಕಾರ್ಯದರ್ಶಿಯಾಗಿ ಶಾಕಿರ್ ಅಹ್ಮದ್ ಕೆರೆಬೈಲ್, ಪತ್ರಿಕಾ ಕಾರ್ಯದರ್ಶಿಯಾಗಿ ಬಿ.ಎಫ್. ಅಬ್ದುರ್ರಹ್ಮಾನ್, ಕೋಶಾಧಿಕಾರಿಯಾಗಿ ಮನ್ಸೂರ್ ಅಹ್ಮದ್ ಅವರುಗಳನ್ನು ಆಯ್ಕೆ ಮಾಡಲಾಯಿತು.
ಚುನಾವಣಾ ಪ್ರಕ್ರಿಯೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವೋಕೇಟ್ ತಾಹೆರ್ ಹುಸೇನ್ ನಿರ್ವಹಿಸಿದರು. ರಾಜ್ಯ ಉಪಾಧ್ಯಕ್ಷರಾದ ಶ್ರೀಯುತ ಶ್ರೀಕಾಂತ್ ಸಾಲ್ಯಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಮೊಯಿನ್ ಖಮರ್ ಅವರು ಹೊಣೆಗಾರಿಕೆಯನ್ನು ನೂತನ ಅಧ್ಯಕ್ಷರಿಗೆ ಹಸ್ತಾಂತರಿಸಿದರು.