ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

0
705

ಸನ್ಮಾರ್ಗ ವಾರ್ತೆ

ವಿಶಾಖಪಟ್ಟಣ, ಮೇ, 7: ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ  ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಗೆ ಮತ್ತು ಇತರೆ ಕಾರ್ಯಗಳಿಗೆ ಬಂದವರು ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ.

ಈ ದುರ್ಘಟನೆಯಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಇಬ್ಬರು ವೃದ್ಧರು, 7 ವರ್ಷದ ಬಾಲಕಿ ಸೇರಿದಂತೆ ಒಟ್ಟು 8  ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐದು ಮಂದಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.