ಸನ್ಮಾರ್ಗ ವಾರ್ತೆ
ಜಲೌನ್ (ಯುಪಿ), ಸೆ ,3: ದಲಿತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದು, ಕಣ್ಣುಗಳು ಕಿತ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿ್ತ್ತುದೆ ಎಂದು ಪೊಲೀಸರು ತಿಳಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಂಜಿತ್ ಅಹಿರ್ವಾರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.
ಆಗಸ್ಟ್ 31 ರಂದು 17 ವರ್ಷದ ಬಾಲಕಿ ನಾಪತ್ತೆಯಾಗಿದ್ದು, ಮರುದಿನ ಕಣ್ಣುಗಳು ಕಿತ್ತ ಸ್ಥಿತಿಯಲ್ಲಿ ಆಕೆಯ ದೇಹ ಪತ್ತೆಯಾಗಿದೆ ಎಂದು ಪೋಸ್ಟ್ಮಾರ್ಟ್ಂ ಮೂಲಕ ಸಾವಿಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ದೃಢ ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆ) ಮತ್ತು 363 (ಅಪಹರಣ) ಹಾಗೂ ಮರಣೋತ್ತರ ಪರೀಕ್ಷೆಯ ನಂತರ ಸೆಕ್ಷನ್ 376 (ಅತ್ಯಾಚಾರ) ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.












