ಸನ್ಮಾರ್ಗ ವಾರ್ತೆ
ಲಕ್ನೊ,ಸೆ.21: ರಾಷ್ಟ್ರೀಯ ಪೌರತ್ವ ಪಟ್ಟಿ ಉತ್ತರಪ್ರದೇಶದಲ್ಲಿ ಜಾರಿಗೆ ತಂದರೆ ಮೊದಲು “ಉತ್ತರಾಖಂಡದ ಮೂಲ ನಿವಾಸಿಯಾದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಊರು ಬಿಡಬೇಕಾದೀತು” ಎಂದು ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಅಗತ್ಯವೆನ್ನಿಸಿದರೆ ಉತ್ತರಪ್ರದೇಶದಲ್ಲಿ ರಾಷ್ಟ್ರೀಯ ಪೌರತ್ವ ಪಟ್ಟಿ ಜಾರಿಗೆ ತರಲಾಗುವುದು ಎಂದು ಯೋಗಿ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಯಾದವ್,”ಉತ್ತರಾಖಂಡದ ಯೋಗಿ ಪೌರತ್ವ ಪಟ್ಟಿಯ ಹೆಸರಿನಲ್ಲಿ ಜನರಲ್ಲಿ ಹೆದರಿಕೆ ಹುಟ್ಟಿಸುತ್ತಿದ್ದಾರೆ. ಹಿಂದೆ ಒಡೆದು ಆಳಿದಂತೆ ಈಗ ಹೆದರಿಸುವ ರಾಜಕೀಯ ಜಾರಿಗೆ ತರುತ್ತಿದ್ದಾರೆ ಎಂದು ಅಖಿಲೇಶ್ ಆರೋಪಿಸಿದರು.
ಕಾಶ್ಮೀರದ ಸ್ಥಿತಿ ಪರಿತಾಪಕರವಾಗಿದೆ. ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ. ಮಕ್ಕಳಿಗೆ ಶಾಲೆಗೆ ಹೋಗಲು ಆಗುತ್ತಿಲ್ಲ. ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಸರಕಾರ ಹೇಳುತ್ತಿದೆ. ಹಾಗಿದ್ದರೆ ಪ್ರೆಜೆಗಳ ಹಕ್ಕನ್ನು ಯಾಕೆ ನಿಷೇಧಿಸಲಾಗುತ್ತಿದೆ ಎಂದು ಅವರು ಪ್ರಶ್ನಿಸಿದರು.












