ಸನ್ಮಾರ್ಗ ವಾರ್ತೆ
ಹೊಸದಿಲ್ಲಿ,ಸೆ.24: ಅಮೆರಿಕದ ಹ್ಯೂಸ್ಟನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯ ಹೌಡಿ ಮೋದಿ ಕಾರ್ಯಕ್ರಮವನ್ನು ಇವೆಂಟ್ ಮ್ಯಾನೆಜ್ಮೆಂಟ್ ಎಂದು ಟೀಕಿಸಿದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಖಾರ ಉತ್ತರ ನೀಡಿದ್ದಾರೆ.
ಕಾಂಗ್ರೆಸ್ಗೆ ಮಾತಾಡಲು ಬೇರೆ ವಿಷಯವಿಲ್ಲ. ಆದ್ದರಿಂದ ಕ್ಷುಲ್ಲಕ ಆರೋಪ ಮಾಡುತ್ತಿದೆ. ಪಾರ್ಟಿಗೆ ನಾಯಕರೂ ಇಲ್ಲ. ಗುರಿಯೂ ಇಲ್ಲ. ಅದು ಈ ರೀತಿಯಲ್ಲಿ ಮುನ್ನಡೆಯುತ್ತಿದೆ ಎಂದು ಜಾವಡೇಕರ್ ಟೀಕಿಸಿದರು.
ಹೌಡಿ-ಮೋದಿ ಇವೆಂಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಅಮೆರಿಕ ಅಧ್ಯಕ್ಷ ಟ್ರಂಪ್ರಿಗೆ ಮೋದಿ ಪ್ರಚಾರ ಕಾರ್ಯ ಮಾಡಿದ್ದಾರೆ. ಇನ್ನೊಂದು ದೇಶದ ಚುನಾವಣೆಯಲ್ಲಿ ಮಧ್ಯಪ್ರವೇಶಸದಿರುವುದು ಭಾರತದ ವಿದೇಶ ನೀತಿ. ಇದನ್ನು ಪ್ರಧಾನಿ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.












