ಸನ್ಮಾರ್ಗ ವಾರ್ತೆ
ಹೊಸದಿಲ್ಲಿ,ಅ.5:ಹರಿಯಾಣ ಮಾಜಿ ಪಿಸಿಸಿ ಅಧ್ಯಕ್ಷ ಅಶೋಕ್ ತನ್ವರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಹರಿಯಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಅವರು ರಾಜೀನಾಮೆ ನೀಡಿರುವುದು ಕಾಂಗ್ರೆಸ್ಸಿಗೆ ದೊಡ್ಡ ಹಿನ್ನಡೆಯಾಗಿದೆ ಎನ್ನಲಾಗುತ್ತಿದೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಅವರು ತಗಾದೆ ಎತ್ತಿ ದಿಲ್ಲಿಯಲ್ಲಿ ಸೋನಿಯಾ ಗಾಂಧಿಯವರ ವಸತಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಸೋನಿಯಾರಿಗೆ ರಾಜೀನಾಮೆ ಪತ್ರ ನೀಡಿದ್ದು ಅದನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್ ಅಸ್ತಿತ್ವವೇ ಅಸ್ತಿರವಾಗುತ್ತಿದ್ದು ಇದಕ್ಕೆ ವಿರೋಧಿಗಳು ಕಾರಣವಲ್ಲ. ಪಕ್ಷದೊಳಗಿರುವವರೇ ಕಾರಣವೆಂದು ಅಶೋಕ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಹರಿಯಾಣ ಕಾಂಗ್ರೆಸ್ ನಾಯಕರು ಹಣ ಪಡೆದು ಸೀಟುಗಳನ್ನು ಮಾರಾಟ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡ ವಿರುದ್ಧ ಅಶೋಕ್ ತನ್ವರ್ ಆರೋಪ ಹೊರಿಸಿದ್ದು ಹೂಡಾರ ಮಧ್ಯಪ್ರವೇಶದಿಂದ ಅಶೋಕ್ರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು ಮತ್ತು ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಕ್ಕೂ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.












