ಶಿವಸೇನೆ ಕೋಮುವಾದಿ ಪಕ್ಷವಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

0
730

ಸನ್ಮಾರ್ಗ ವಾರ್ತೆ

ಬೆಂಗಳೂರು,ನ.26: ಬಿಜೆಪಿ ನೇತೃತ್ವದ ಎನ್‍ಡಿಎಯಿಂದ ಹೊರ ಬಂದಂದಿನಿಂದ ಶಿವಸೇನೆ ಕೋಮುವಾದಿ ಪಾರ್ಟಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಿಲುವಿಗೆ ಸಂಬಂಧಿಸಿದ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈಗೆ ಪ್ರತಿಕ್ರಿಯಿಸಿದ್ದಾರೆ. ಬಹುಮತ ಇಲ್ಲದೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ರಚಿಸಲು ಅನುಮತಿ ನೀಡಿದ ಕೇಂದ್ರ ಸರಕಾರ ಸಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿತು ಎಂದು ಅವರು ಆರೋಪಿಸಿದರು.

ಕರ್ನಾಟಕದ ಉಪಚುನಾವಣೆಯ ಬೆನ್ನಿಗೆ ಇಲ್ಲಿನ ಬಿಜೆಪಿ ಸರಕಾರ ಪತನಗೊಳ್ಳಲಿದೆ. ಸರಕಾರ ಉಳಿಸಿಕೊಳ್ಳಲು ಬಿಜಪಿಗೆ ಎಂಟು ಒಂಬತ್ತು ಸೀಟುಗಳು ಬೇಕು. ಆದರೆ ಈಗಿನ ಪರಿಸ್ಥಿತಿಯಲ್ಲಿ ಅಷ್ಟು ಸೀಟುಗಳು ಬಿಜೆಪಿಗೆ ಸಿಗುವ ಸಾಧ್ಯತೆಯಿಲ್ಲ. ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ಶಾಸಕರನ್ನು ಖರೀದಿಸಿದರು. ಪ್ರತಿಯೊಬ್ಬ ಶಾಸಕರಿಗೆ 25ರಿಂದ 30 ಕೋಟಿರೂಪಾಯಿ ನೀಡಲಾಗಿದೆ. ತನ್ನ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡರು ಹೇಳಿದ್ದಾರೆ. ಇದಕ್ಕೆ ಯಡಿಯೂರಪ್ಪ ಏನನ್ನುತ್ತಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.