ಸನ್ಮಾರ್ಗ ವಾರ್ತೆ
ಬೆಂಗಳೂರು,ನ.29: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರ್ ಸ್ವಾಮಿ ವಿರುದ್ಧ ದೇಶದ್ರೋಹ ಪ್ರಕರಣವನ್ನು ಕೋರ್ಟಿನ ಆದೇಶದ ಮೇರೆಗೆ ದಾಖಲಿಸಿಕೊಳ್ಳಲಾಗಿದೆ. ಕರ್ನಾಟಕದ ಹಿರಿಯ ರಾಜಕೀಯ ನಾಯಕರಾದ ಡಿ.ಕೆ ಶಿವಕುಮಾರ್, ಪರಮೇಶ್ವರ್, ದಿನೇಶ್ ಗುಂಡುರಾವ್, ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕೇಸು ದಾಖಲಿಸಲಾಗಿದೆ.
ದೇಶದ್ರೋಹ, ಕ್ರಿಮಿನಲ್ ಸಂಚು, ದೇಶದ ವಿರುದ್ಧ ಯುದ್ಧಕ್ಕೆ ಯತ್ನ ಆರೋಪಗಳನ್ನು ಹೊರಿಸಲಾಗಿದೆ. ಲೋಕಸಭಾ ಚುನಾವಣೆಯ ವೇಳೆ ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದಕ್ಕೆ ಕೇಸು. ಸಾರ್ವಜನಿಕ ಕಾರ್ಯಕರ್ತ ಎನ್ನಲಾಗುವ ಮಲ್ಲಿಕಾರ್ಜುನರ ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಸಿಸಿಎಚ್ ಕೋರ್ಟು ಆದೇಶದ ಪ್ರಕಾರ ಕಮರ್ಶಿಯಲ್ ಸ್ಟ್ರೀಟ್ ಪೊಲೀಸರು ಕೇಸು ದಾಖಲಿಸಿದ್ದಾರೆ. ಬೆಂಗಳೂರಿನ ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆ ಬಿಜೆಪಿಯ ಏಜೆಂಟು ಎಂದು ಆರೋಪಿಸಿದ್ದರು. ಅಧಿಕೃತ ಕರ್ತವ್ಯ ನಿರ್ವಹಣೆಗೆ ಅಡ್ಡಿ ಸೃಷ್ಟಿಸಿದ ಆರೋಪಗಳು ದೂರಿನಲ್ಲಿವೆ.












