ಸಿಎಎ ವಿರೋಧಿ ಪ್ರತಿಭಟನೆ: ಭಾರತೀಯ ಅಧಿಕಾರಿಗಳನ್ನು ಭೇಟಿಯಾಗಿ ಕಳವಳ ವ್ಯಕ್ತಪಡಿಸಿದ ಅಮೇರಿಕ

0
640

ಸನ್ಮಾರ್ಗ ವಾರ್ತೆ

ಪಿಟಿಐ ವರದಿ

ವಾಷಿಂಗ್ಟನ್: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅಮೇರಿಕ ಕಳವಳ ವ್ಯಕ್ತಪಡಿಸಿದೆ ಮತ್ತು ಭಾರತೀಯ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಎತ್ತಿದೆ ಎಂದು ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದ ನವ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರತದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದೆ.

ಅನೀಮಧೇಯವಾಗುಳಿಯಲು ಬಯಸಿದ ರಾಜ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು,ಮಾತಾಡುತ್ತಾ, ಭಾರತದಲ್ಲಿ ಅಧಿಕಾರಿಗಳೊಂದಿಗೆ ಭೇಟಿಯಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.

“ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಮಗೆ ಕಾಳಜಿ ಇದೆ. ನಾನು ಭಾರತದ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ್ದೇನೆ. ನಾನು ಭಾರತೀಯ ರಾಯಭಾರಿಯನ್ನು ಭೇಟಿ ಮಾಡಿ ಕಳವಳ ವ್ಯಕ್ತಪಡಿಸಿದ್ದೇನೆ ಎಂದು ಇತ್ತೀಚೆಗೆ ಭಾರತದಲ್ಲಿದ್ದ ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದರು.