ಹುಬ್ಬಳ್ಳಿ; ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪ: ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

0
824

ಸನ್ಮಾರ್ಗ ವಾರ್ತೆ

ಹುಬ್ಬಳ್ಳಿ: ಫೆ. 15, ಇಲ್ಲಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆಂದು ಆರೋಪಿಸಲಾಗಿದ್ದು, ಅವರ ಮೇಲೆ ದೇಶದ್ರೋಹ ಪ್ರಕರಣವೂ ಸೇರಿದಂತೆ ವಿವಿಧ ಕಲಂನಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸಿವಿಲ್ ಇಂಜಿನಿಯರ್ ವಿಭಾಗದಲ್ಲಿ ಓದುತ್ತಿರುವ ಈ ಮೂವರು ವಿದ್ಯಾರ್ಥಿಗಳು ಕಾಶ್ಮೀರಿ ಮೂಲದವರಾಗಿದ್ದು ಪಾಕಿಸ್ತಾನ ಪರ ಘೋಷಣೆ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪುಲ್ವಾಮ ದಾಳಿಗೆ ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿಗಳು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಾಂಶುಪಾಲ ಡಾಕ್ಟರ್ ಬಸವರಾಜ ಆನಾಮಿ, ಸರ್ಕಾರಿ ಕೋಟಾದಡಿ 3 ಕಾಶ್ಮೀರಿ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವಿಡಿಯೋ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದೇವೇಳೆ ಸಂಘಪರಿವಾರದ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿರುವ ಮಾಹಿತಿಯು ಹೊರಬಿದ್ದಿದ್ದು ಟಿವಿ ಚಾನೆಲ್ ಗಳಲ್ಲಿ ವಿಡಿಯೋ ಪ್ರಸಾರವಾಗಿದೆ.