ಸಿಎಎ ಪ್ರತಿಭಟನಾಕಾರರೊಂದಿಗೆ ಕೇಂದ್ರ ಸರಕಾರ ಮಾತುಕತೆ ನಡೆಸಲಿ: ಜಮಾಅತ್ ರಾಷ್ಟ್ರಾಧ್ಯಕ್ಷ ಸೈಯದ್ ಸಆದತುಲ್ಲಾ ಹುಸೇನಿ

0
804

ಸನ್ಮಾರ್ಗ ವಾರ್ತೆ

ನವದೆಹಲಿ: ಸಿಎಎ-ಎನ್‌ಆರ್‌ಸಿ ವಿರುದ್ಧ ಪ್ರತಿಭಟಿಸುವವರೊಂದಿಗೆ ಕೇಂದ್ರ ಸರಕಾರ ಮಾತುಕತೆ ನಡೆಸಬೇಕೆಂದು ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಅಧ್ಯಕ್ಷ ಸೈಯದ್ ಸಆದತುಲ್ಲಾ ಹುಸೇನಿ ಅವರು ಆಗ್ರಹಿಸಿದ್ದಾರೆ.

ಸರ್ಕಾರ ಪ್ರತಿಭಟನಾಕಾರರೊಂದಿಗೆ ಮಾತನಾಡಬೇಕು. ಶಹೀನ್ ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಸರ್ಕಾರ ಸಂಪರ್ಕಿಸಿದರೆ ಅದು ಸ್ವಾಗತಾರ್ಹ ಹೆಜ್ಜೆಯಾಗಿದೆ. ಸಂವಾದದ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಭಾಗವಾಗಿದೆ ಮತ್ತು ಅದನ್ನು ತ್ಯಜಿಸಬಾರದು ಎಂದವರು ಹೇಳಿದ್ದಾರೆ.

ಸಿಎಎ-ಎನ್ಪಿಆರ್-ಎನ್ಆರ್ಸಿ ಬಗ್ಗೆ ಚರ್ಚೆ ಸಂಸತ್ತಿನಲ್ಲಿ ನಡೆಯಲಿದೆ ಎಂದು ನಮಗೆ ಖಚಿತವಾಗಿದೆ. ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಭಾರತದ ರಾಷ್ಟ್ರಪತಿಗಳು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಿಎಎ ಬಗ್ಗೆ ಮಾತನಾಡಿದ್ದಾರೆ. ಇದನ್ನು ವಿರೋಧ ಪಕ್ಷದ ನಾಯಕರು ಖಂಡಿಸಿದ್ದಾರೆ. ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಗಂಭೀರ ಚರ್ಚೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ನಾವು ಸಂಸದರು ಮತ್ತು ಪ್ರತಿಪಕ್ಷದ ಮುಖಂಡರೊಂದಿಗೆ ಮಾತನಾಡುತ್ತಿದ್ದೇವೆ ಮತ್ತು ಸಿಎಎ-ಎನ್‌ಪಿಆರ್-ಎನ್‌ಆರ್‌ಸಿ ಬಗ್ಗೆ ನಮ್ಮ ನಿಲುವಿನ ಬಗ್ಗೆ ಅವರಿಗೆ ತಿಳಿಸುತ್ತಿದ್ದೇವೆ ಎಂದವರು ಹೇಳಿದ್ದಾರೆ.