ಸನ್ಮಾರ್ಗ ವಾರ್ತೆ
ಹೊಸದಿಲ್ಲಿ, ಫೆ. 29: ವಿಶ್ವಾದ್ಯಂತ ಕೊರೊನಾ ವೈರಸ್ ಹರಡಿದ್ದು ಈ ಹಿನ್ನೆಲೆಯಲ್ಲಿ ವಿಶ್ವ ಶೂಟಿಂಗ್ ಚಾಂಪಿಯನ್‍ಶಿಪ್‍ನಿಂದ ಭಾರತ ಹಿಂದೆ ಸರಿದಿದೆ. ಮಾರ್ಚ್ ಐದರಿಂದ ಹನ್ನೆರಡರವರೆಗೆ ಮೆಡಿಟರೇನಿಯನ್ ದೇಶ ಸೈಪ್ರಸ್‍ನಲ್ಲಿ ವಿಶ್ವ ಶೂಟಿಂಗ್ ಚಾಂಪಿಯನ್ ಶಿಪ್ ನಡೆಯಲಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯ ಮೇರೆಗೆ ನ್ಯಾಶನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯ ವಿಶ್ವಕಪ್‍ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ.
ಕೊರೊನಾ ಬಾಧೆಯ ಹಿನ್ನೆಲೆಯಲ್ಲಿ ಕೆಲವು ದೇಶಗಳಿಗೆ ಪ್ರಯಾಣ ನಿಷೇಧ ಇದೆ. ಈ ದೇಶಗಳಿಂದ ವಿಶ್ವ ಶೂಟಿಂಗ್ ಚಾಂಪಿಯನ್ ಶಿಫ್‍ನಲ್ಲಿ ಭಾಗವಹಿಸಲು ಆಟಗಾರರು ಬರುತ್ತಾರೆ. ಆದ್ದರಿಂದ ಭಾರತ ಹಿಂದೆ ಸರಿಯುತ್ತಿದೆ ಎಂದು ರೈಫಲ್ ಅಸೋಸಿಯೇಶನ್ ಅಧ್ಯಕ್ಷ ರವೀಂದರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.












