
ಸನ್ಮಾರ್ಗ ವಾರ್ತೆ
ಹೊಸದಿಲ್ಲಿ, ಮಾ.14: ದೇಶದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆಯನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಎಕ್ಸೈಸ್ ತೀರ್ವೆಯಲ್ಲಿ ಮೂರು ರೂಪಾಯಿ ಹೇಚ್ಚಳವಾಗಿದೆ. ಕೇಂದ್ರ ಸರಕಾರ ಇದಕ್ಕೆ ಸಂಬಂಧಿಸಿದ ಪ್ರಕಟಣೆ ಹೊರಡಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾದಂತೆ ಕೇಂದ್ರ ಸರಕಾರ ತೆರಿಗೆ ಹೆಚ್ಚಿಸಿದೆ. ಪೆಟ್ರೋಲ್, ಡೀಸೆಲ್‍ಗೆ ವಿಶೇಷ ಎಕ್ಸೈಸ್ ತೆರಿಗೆ ಎರಡು ರೂಪಾಯಿ ಹೆಚ್ಚಿಸಲಾಗಿದೆ. ಎಂಟು ರೂಪಾಯಿ ಒಂದು ಲೀಟರ್ ಪೆಟ್ರೋಲ್ ಡೀಸೆಲ್ ಮೇಲೆ ಎಕ್ಸೈಸ್ ತೆರಿಗೆ, ರಸ್ತೆ ಸೆಸ್ ಯಾನೆ ತೆರಿಗೆ ಲೀಟರಿಗೆ ಒಂದು ರೂಪಾಯಿ ಹೆಚ್ಚಿಸಲಾಗಿದೆ. ಹೀಗಾಗಿ ಹತ್ತು ರೂಪಾಯಿ ರಸ್ತೆ ಸೆಸ್ ಆಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆಯಾದಾಗ ತೆರಿಗೆ ನಷ್ಟವನ್ನು ಕಡಿಮೆ ಮಾಡಲಿಕ್ಕಾಗಿ ಇಂಧನ ತೆರಿಗೆ ಹೆಚ್ಚಿಸಿದ್ದೆಂದು ಕೇಂದ್ರ ಸರಕಾರ ವಾದಿಸುತ್ತಿದೆ. ಇದೇ ವೇಳೆ, ದೇಶ ಕಟು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು ಜಾಗತಿಕ ಮಾರುಕಟ್ಟೆಯಲ್ಲಿ ತೈಲಕ್ಕೆ ಆಗಿರುವ ಲಾಭವನ್ನು ಜನರಿಗೆ ನೀಡಬೇಕೆಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.











