ಕೊರೊನಾ ಸುಳ್ಳು ಪ್ರಚಾರ: ವ್ಯಕ್ತಿಯ ಬಂಧನ

0
571

ಸನ್ಮಾರ್ಗ ವಾರ್ತೆ

ಕೇರಳ, ಮಾ. 20: ಕೊರೊನಾ ಕುರಿತು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಪ್ರಚಾರ ಮಾಡಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಪಟ್ಟ ಪೊಲೀಸರು ಈತನನ್ನು ಬಂಧಿಸಿದ್ದು ಕಲ್ಪಟ್ಟದ ಖಾಸಗಿ ಆಸ್ಪತ್ರೆಯಲ್ಲಿ ನಾಲ್ಕನೆ ಮೈಲು ಎಂಬಲ್ಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ ಎಂದು ಈತ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದ.

ಈತ ಅಡ್ಮಿನಿ ಆಗಿದ್ದ ವಾಟ್ಸಪ್ ಗ್ರೂಪ್‍ನಲ್ಲಿ ಸುಳ್ಳು ವಾರ್ತೆ ಪ್ರಚಾರವಾಗಿದೆ. ಬಂಧಿತ ವ್ಯಕ್ತಿಯನ್ನು ನಂತರ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ. ಸುಳ್ಳು, ಅಪಪ್ರಚಾರಕ್ಕೆ ಪ್ರೇರೇಪಿಸಿದ ಪ್ರಕರಣವನ್ನು ಈತನ ವಿರುದ್ಧ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಜನರು ದಿಗ್ಭ್ರಮೆಗೊಳ್ಳುವಂತೆ ಮಾಡುವ ರೀತಿಯಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸಧಿಕಾರಿ ತಿಳಿಸಿದ್ದಾರೆ.